ಹೈದರಾಬಾದ್: ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ ಭಾರತೀಯ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದು, ಈ ಪಂದ್ಯದ ಮೂಲಕ ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ದಾಖಲೆ ಬರೆದಿದ್ದಾರೆ.
ಈ ಮೂಲಕ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ಬೌಲಿಂಗ್ ಜೋಡಿ ಆಗಿದ್ದಾರೆ. 54 ಪಂದ್ಯಗಳಲ್ಲಿ 501 ವಿಕೆಟ್ ಗಳನ್ನು ಗಳಿಸಿದ ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ದಾಖಲೆ ಮುರಿದು 504 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
138 ಟೆಸ್ಟ್ ಪಂದ್ಯಗಳಲ್ಲಿ 1,039 ವಿಕೆಟ್ಗಳನ್ನು ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ಜೋಡಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಜೋಡಿಯಾಗಿದೆ. ಮಿಚೆಲ್ ಸ್ಟಾರ್ಕ್ ಮತ್ತು ನಾಥನ್ ಲಿಯಾನ್ 81 ಟೆಸ್ಟ್ಗಳಲ್ಲಿ 643 ವಿಕೆಟ್ ಪಡೆದು ನಂತರದ ಸ್ಥಾನದಲ್ಲಿದ್ದಾರೆ.
ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಈ ಜೋಡಿ 6 ವಿಕೆಟ್ ಪಡೆದ ಸಾಧನೆ ಮಾಡಿದೆ. ಭಾರತದ ಪರ ಅಶ್ವಿನ್/ಜಡೇಜಾ – 504 ವಿಕೆಟ್, ಕುಂಬ್ಳೆ/ಹರ್ಭಜನ್ – 501, ಜಹೀರ್/ ಹರ್ಭಜನ್ – 474, ಅಶ್ವಿನ್/ ಉಮೇಶ್ – 431, ಕುಂಬ್ಳೆ/ ಶ್ರೀನಾಥ್ – 412 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.