ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ 24 ರನ್ ಗಳಿಸಿದರೂ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆ ಮುರಿದಿದ್ದಾರೆ.
ರೋಹಿತ್ ಶರ್ಮಾ ಈ ಪಂದ್ಯದಲ್ಲಿ 27 ಎಸೆತಗಳನ್ನು ಎದುರಿಸಿ ಮೂರು ಬೌಂಡರಿ ಚಚ್ಚಿ 24 ರನ್ ಗಳಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತೀಯರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.
ಐದನೇ ಸ್ಥಾನದಲ್ಲಿದ್ದ ರೋಹಿತ್, ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ಬ್ಯಾಟರ್ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.
ಸೌರವ್ ಗಂಗೂಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 421 ಪಂದ್ಯಗಳನ್ನಾಡಿದ್ದು, ಅದರಲ್ಲಿ 18,433 ರನ್ ಕಲೆಹಾಕಿದ್ದಾರೆ. ರೋಹಿತ್ ಶರ್ಮಾ 468 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 490 ಇನ್ನಿಂಗ್ಸ್ ಗಳಲ್ಲಿ 18,444 ರನ್ ಗಳಿಸಿದ್ದಾರೆ. ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಉತ್ತಮ ರನ್ ಕಲೆ ಹಾಕಿದೆ. ಎರಡನೇ ದಿನದಾಟದಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 421 ರನ್ ಕಲೆಹಾಕಿ, 175 ರನ್ ಗಳ ಮುನ್ನಡೆ ಸಾಧಿಸಿದೆ.