ಹಾಸನ: ಜೊತೆಯಲ್ಲಿಯೇ ಪಾರ್ಟಿ ಮಾಡಿ ನಂತರ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಹೊರವಲಯದ ಬುಸ್ತೇನಹಳ್ಳಿ ಹತ್ತಿರದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ಈ ಘಟನೆ ಕಳೆದ ಎರಡು ದಿನಗಳ ಹಿಂದೆಯೇ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಅಂದಾಜು 40 ವರ್ಷ ವ್ಯಕ್ತಿಯ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಆದರೆ, ಕೊಲೆಯಾದ ವ್ಯಕ್ತಿಯ ಬಲಗೈ ಮೇಲೆ ಲಕ್ಷ್ಮೀ ಎಂಬ ಹೆಸರಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸತ್ತ ವ್ಯಕ್ತಿಯ ಗುರುತು ಪತ್ತೆ ಮಾಡಲು ಮುಂದಾಗಿದ್ದಾರೆ.