ಯಾದಗಿರಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2 ಕೋಟಿ ರೂ. ಮೌಲ್ಯದ 6,077 ಕ್ವಿಂಟಲ್ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಯನ್ನು (Ration Rice) ಯಾದಗಿರಿ ಜಿಲ್ಲೆಯ ಸುರಪುರದಿಂದ ರಾಯಚೂರು ಜಿಲ್ಲೆಯ ಲಿಂಗಸೂರಿಗೆ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಸುರಪುರ ಠಾಣೆ ಪೊಲೀಸರು 69 ಸಾವಿರ ರೂ. ಮೌಲ್ಯದ ಪಡಿತರ ಅಕ್ಕಿ ವಶಕ್ಕೆ ಪಡೆದಿದ್ದಾರೆ.
50 ಕೆಜಿಯ 45 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ್ದ ಪಡಿತರ ಅಕ್ಕಿ ಗೂಡ್ಸ್ ವಾಹನದಲ್ಲಿ ಪತ್ತೆಯಾಗಿದೆ. ದಾಳಿ ನಡೆಯುತ್ತಿದ್ದಂತೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








