ಕ್ಯಾನ್ಸರ್ ನಿಂದಾಗಿ ನಮೀಬಿಯಾ ಅಧ್ಯಕ್ಷ ಹೇಗ್ ಗೇನ್ಗೋಬ್(Hage Geingob) ಇಹಲೋಕ ತ್ಯಜಿಸಿದ್ದಾರೆ.
ಹೇಗ್ ಅವರು ಕಳೆದ ಹಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ, ಇತ್ತೀಚೆಗೆ ಸಾಮಾನ್ಯ ವೈದ್ಯಕೀಯ ಪರೀಕ್ಷೆಯ ನಂತರ ಯುನೈಟೆಡ್ ಸ್ಟೇಟ್ಸ್ಗೆ ಹೋಗುವುದಾಗಿ ತಿಳಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದಾಗಿ ಹೇಳಿದ್ದರು. 1990 ರಲ್ಲಿ ಸ್ವಾಪೋ ಪಕ್ಷವು ನಮೀಬಿಯಾದಲ್ಲಿ ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದೆ. ಸದ್ಯ ಪಕ್ಷದ ಅಧ್ಯಕ್ಷರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ನಂದಿ-ನೈತ್ವಾ ಅವರನ್ನು ಆಯ್ಕೆ ಮಾಡಲಾಯಿತು. ಸದ್ಯ ಇವರು ನಮೀಬಿಯಾದ ಉಪ ಪ್ರಧಾನ ಮಂತ್ರಿಯಾಗಿದ್ದು, ಗೆದ್ದರೆ ದೇಶದ ಮೊದಲ ಮಹಿಳಾ ಅಧ್ಯಕ್ಷರಾಗುತ್ತಾರೆ.








