ಕಾರವಾರ: ಕುಡಿದ ಮತ್ತಿನಲ್ಲಿ ಮಾಜಿ ಶಾಸಕರ ಪುತ್ರ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress)ನ ಮಾಜಿ ಶಾಸಕ ವಿ.ಎಸ್. ಪಾಟೀಲ್ ಅವರ ಪುತ್ರನನ್ನು ಮುಂಡಗೋಡ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಾಪುಗೌಡ ಪಾಟೀಲ್ (Bapugouda Patil) ಬಂಧಿತ ಆರೋಪಿ. ಆರೋಪಿಯು ಕುಡಿದ ಮತ್ತಿನಲ್ಲಿ ತನ್ನ 15 ಜನ ಸ್ನೇಹಿತರೊಂದಿಗೆ ಸೇರಿ 2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.
ಸದ್ಯ ಹಲ್ಲೆ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ. ಈತ ಕಳೆದ 6 ತಿಂಗಳುಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಸದ್ಯ ಬಂಧಿಸಿದ ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಸದ್ಯ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.








