ಚಿಕ್ಕಮಗಳೂರು: ಮಂಗನ ಕಾಯಿಲೆಗೆ ವೃದ್ಧ ವ್ಯಕ್ತಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ (Health Departmnet) ಅಲರ್ಟ್ ಆಗಿದೆ.
ಅಲ್ಲದೇ, ಸಾವನ್ನಪ್ಪಿದ ವ್ಯಕ್ತಿ ಸೇರಿದಂತೆ ಜಿಲ್ಲೆಯಲ್ಲಿ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳು KFD (Kyasanur Forest Disease) ವಾರ್ಡ್ ತೆರೆದಿದ್ದಾರೆ.
ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ವೃದ್ಧ(79) ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ಹೀಗಾಗಿ ಸಾವನ್ನಪ್ಪಿದ ವೃದ್ಧ ವಾಸಿಸುತ್ತಿದ್ದ ಶೃಂಗೇರಿ ತಾಲೂಕಿನ ಬೇಗನೆ ಗ್ರಾಮಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಕೆಎಫ್ಡಿ ಸೋಂಕು ಹರಡದಂತೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಮನೆ ಮನೆಗೆ ತೆರಳಿ ಔಷಧಿ ವಿತರಿಸುತ್ತಿದ್ದಾರೆ. ಮಂಗಗಳ ರಕ್ತದ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ.








