ಉಡುಪಿ: ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬರೋಬ್ಬರಿ ಮೂರು ವರ್ಷಗಳ ನಂತರ ಬಂಧಿಸಿದ್ದಾರೆ.
ಮೂರು ವರ್ಷಗಳ ಹಿಂದೆ ನಡೆದಿದ್ದ ಗೃಹಿಣಿ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿ ವಿದೇಶಕ್ಕೆ ಹೋಗಿ ತಲೆ ಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಏರ್ ಪೋರ್ಟ್ ನಲ್ಲಿ ಕಾಣಿಸುತ್ತಿದ್ದಂತೆ ಬಂಧಿಸಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. 2021ರ ಜುಲೈನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕುಮ್ರಗೋಡುವಿನ ಪ್ಲಾಟ್ ನಲ್ಲಿ ಗೃಹಿಣಿ ವಿಶಾಲ ಗಾಣಿಗ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.
ಆರೋಪಿ ವಿಶಾಲ ಗಾಣಿಗ ಪತಿ ರಾಮಕೃಷ್ಣ, ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ ನನ್ನು ಬಂಧಿಸಲಾಗಿತ್ತು. ಆದರೆ, ಸಹಕರಿಸಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ವಿದೇಶಕ್ಕೆ ಪರಾರಿಯಾಗಿದ್ದ. ಈಗ ಮೂರು ವರ್ಷಗಳ ನಂತರ ಮೂರನೇ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.








