ಇಸ್ಲಾಮಾಬಾದ್: ಪಾಕ್ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ (Pakistan General Election) ಆರಂಭವಾಗಿದ್ದು, ಭದ್ರತೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಮೊಬೈಲ್ ಸೇವೆ ಸ್ಥಗಿತಗೊಳಿಸಲಾಗಿದೆ.
ಪಾಕಿಸ್ತಾನದಲ್ಲಿ 12 ಕೋಟಿಗೂ ಅಧಿಕ ಮತದಾರರನ್ನು ಹೊಂದಿರುವ ಪಾಕಿಸ್ತಾನದಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದೆ. ಪಾಕಿಸ್ತಾನದ ಆಂತರಿಕ ಸಚಿವಾಲಯವು ಪಾಕಿಸ್ತಾನದ ಒಟ್ಟಾರೆ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿ ಸ್ಥಾಪಿಸಿದೆ ಎನ್ನಲಾಗಿದೆ.
ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ದೇಶದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. 90,675 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 12 ಕೋಟಿಗೂ ಅಧಿಕ ನೋಂದಾಯಿತ ಮತದಾರರು ಈ ಮತದಾನದಲ್ಲಿ ಭಾಗವಹಿಸಲಿದ್ದಾರೆ.








