ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಚುನಾವಣೆ ಮುಕ್ತಾಯವಾಗಿದ್ದು, ಕುದುರೆ ವ್ಯಾಪಾರದ ಪರಿಸ್ಥಿತಿ ಎದುರಾಗಿದೆ.
ಜೈಲಿನಲ್ಲಿರುವ ಇಮ್ರಾನ್ ಖಾನ್ಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗಿತ್ತು. ಆದರೆ, ಪಾಕ್ ಚುನಾವಣೆಯಲ್ಲಿ ಇಮ್ರಾನ್ ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇನ್ಸಾಫ್ (ಪಿಟಿಐ) ಅನ್ನು ಬೆಂಬಲಿಸುವ ಸ್ವತಂತ್ರ ಅಭ್ಯರ್ಥಿಗಳು 101 ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. ಆದರೆ, ಸರ್ಕಾರ ರಚನೆಗೆ ಬೇಕಾಗಿದ್ದ ಬಹುಮತಕ್ಕೆ 32 ಸ್ಥಾನಗಳ ಕೊರತೆ ಎದುರಿಸಿದೆ.
ಇನ್ನುಳಿದಂತೆ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್), ಸೇನೆಯ ಬೆಂಬಲ ಪಡೆದಿದೆ. 266 ಸ್ಥಾನಗಳಲ್ಲಿ 73 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಸದ್ಯ ಪಾಕ್ ನಲ್ಲಿ ಯಾವ ಸರ್ಕಾರ ರಚನೆಯಾಗಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.