ಗದಗ: ಸಹೋದರಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪುಡಿ ರೌಡಿಗಳು ಯುವಕನನ್ನು ಥಳಿಸಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಹುಯಿಲಗೋಳ ರಸ್ತೆಯಲ್ಲಿ ನಡೆದಿದೆ. ತೇಜಸ್ ಮೇಹರವಾಡಿ(20) ಪುಡಿ ರೌಡಿಗಳಿಂದ ಹಲ್ಲೆಗೊಳಗಾಗಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ತೇಜಸ್ ನ ಸಹೋದರಿಯನ್ನು ಚುಡಾಯಿಸಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಎಂಟು ಯುವಕರ ಗುಂಪು ಹಲ್ಲೆ ನಡೆಸಿದ್ದು, ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ. ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಯುವಕನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಸಾವು- ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.