ರಾಯಚೂರು: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಅಸ್ಥಿಪಂಜರವಾಗಿ (Skeleton) ಪತ್ತೆಯಾಗಿರುವ ಘಟನೆ ತಾಲೂಕಿನ ಕೊರ್ತಕುಂದಾ ಗ್ರಾಮದಲ್ಲಿ ನಡೆದಿದೆ.
ರಸೂಲ್ ಸಾಬ್ (45) ಅಸ್ಥಿಪಂಜರವಾಗಿ ಪತ್ತೆಯಾಗಿರುವ ವ್ಯಕ್ತಿ. ರಸೂಲ್ ಜನವರಿ 4 ರಂದು ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಆದರೆ, ಸೋಮವಾರ ಗ್ರಾಮದ ದರ್ಗಾ ಹತ್ತಿರ ಅವರ ರುಂಡ ಪತ್ತೆಯಾಗಿತ್ತು. ಮತ್ತೆ ಇಂದು ದರ್ಗಾದಿಂದ 1. ಕಿ.ಮೀ ದೂರದಲ್ಲಿರುವ ಬೆಟ್ಟದಲ್ಲಿ ಮುಂಡ ಪತ್ತೆಯಾಗಿದೆ.
ದೇಹದ ಮೇಲಿದ್ದ ಬಟ್ಟೆಗಳ ಆಧಾರದ ಮೇಲೆ ರಸೂಲ್ ಅವರು ಎಂದು ಗುರುತಿಸಲಾಗಿದೆ. ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








