ಬೆಂಗಳೂರು : ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸರ್ವಪಕ್ಷ ಸಭೆಗ ಹೋಗುವ ಮುನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಾಸ್ತವದಲ್ಲಿ ಲಾಕ್ ಡೌನ್ ಈ ಟೈಮ್ ನಲ್ಲಿ ಮಾಡಬೇಕಿತ್ತು. ಆದರೆ ಅಗತ್ಯವಿಲ್ಲದ ಸಮಯದಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ಜೊತೆ ಆಸ್ಪತ್ರೆಗಳನ್ನು ನಿವಾರಣೆ ಮಾಡಲು ಸರ್ಕಾರ ಸರಿಯಾದ ಯೋಜನೆ ಮಾಡಿಲ್ಲ. ಇದರಿಂಗ ರೋಗಿಗಗಳಿಗೆ ಸಾಕಷ್ಟು ತೊಂದರೆಯಾಗಿದೆ.
ಸರ್ವಪಕ್ಷ ಸಭೆ ಯಾಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಶಾಸಕರ ಸಭೆ ಕರೆಯಬೇಕಿತ್ತು.ಆದರೆ ಈಗ ಯಾಕೆ ಕರೆದಿದೆ ಎಂದು ಗೊತ್ತಿಲ್ಲ. ಆದರೆ ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.








