ಮಂಗಳೂರು: ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿದ್ದು, ಚಿಕ್ಕವಯಸ್ಸಿನವರು ಕೂಡ ಬಲಿಯಾಗುತ್ತಿರುವುದಕ್ಕೆ ಆತಂಕ ವ್ಯಕ್ತವಾಗುತ್ತಿದೆ.
ಜಿಲ್ಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪಟ್ಟಣ ಹತ್ತಿರ ನೆಕ್ಕಿಲಾಡಿ ಕುರ್ವೇಲುನ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಜಾ (17) ಸಾವನ್ನಪ್ಪಿದ ದುರ್ದೈವಿ.
ಉದ್ಯಮಿ ದಾವೂದ್ ಎಂಬವರ ಪುತ್ರಿ ಹಫೀಜಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಿನೆ ತಡರಾತ್ರಿವರೆಗೂ ಓದಿ ಮಲಗಿದ್ದಾರೆ. ಆದರೆ, ಬೆಳಿಗ್ಗೆ ಮೇಲೆ ಎದ್ದಿಲ್ಲ. ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.








