ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮತ್ತೊಮ್ಮೆ ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಏತನ್ಮಧ್ಯೆ ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಯಾರೋ ಹೇಳ್ತಾರೆ ಅಂತ ಲಾಕ್ ಡೌನ್ ಮಾಡಲು ಆಗಲ್ಲ ಎಂದಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಹೇಳ್ತಾರೆ ಅಂತ ಲಾಕ್ ಡೌನ್ ಮಾಡಲು ಆಗಲ್ಲ. ದೇಶ ಹಾಗೂ ಪ್ರಪಂಚದಲ್ಲಿ ಲಾಕ್ ಡೌನ್ ಇಲ್ಲ. ಎಲ್ಲ ಕಡೆ ಇದ್ದಂತೆ ಇಲ್ಲಿಯೂ ಇರುತ್ತೆ. ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವೈಫಲ್ಯ ಆಗಿಲ್ಲ ಎಂದು ಲಾಕ್ ಡೌನ್ ಬಗ್ಗೆ ಸ್ಪಷ್ಟನೆ ನೀಡಿದರು.
ಇತ್ತ ಲಾಕ್ ಡೌನ್ ಬೇಕು ಎಂದು ಕೆಲ ಕಾಂಗ್ರೆಸ್, ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ. ಅಗತ್ಯ ಇರುವ ಕಡೆ ಲಾಕ್ ಡೌನ್ ಇರಲಿ ಎಂದು ಕೆಲ ಬಿಜೆಪಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.








