ಪಾಟ್ನಾ : ಬಿಹಾರದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು 92 ಮಂದಿ ಮೃತಪಟ್ಟಿದ್ದಾರೆ. ಇದೀಗ ಮೃತರ ಕುಟುಂಬಗಳಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಲಾ 4 ಲಕ್ಷ ರೂ ಘೋಷಿಸಿದ್ದಾರೆ.
ಸಿಡಿಲು ಬಡಿದು ಸಾವನ್ನಪ್ಪಿದವರ ಪೈಕಿ ಹೆಚ್ಚಿನ ಮಂದಿ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಡಿಎಂಡಿ ಮಾಹಿತಿ ನೀಡಿದೆ. ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯು ರಾಜ್ಯದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಮೊದಲೇ ಅಬ್ಬರಿಸಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಎಲ್ಲಾ 38 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಪ್ರಕಟಣೆ ತಿಳಿಸಿದೆ.
ಹವಾಮಾನ ಇಲಾಖೆಯು ರಾಜ್ಯದಲ್ಲಿ ಮುಂದಿನ 5 ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಕಿಶನ್‌ಗಂಜ್, ಅರೇರಿಯಾ, ಕಟಿಹಾರ್, ಪೂರ್ಣಿಯಾ, ಸುಪಾಲ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.








