ಮಂಗಳೂರು: ನಗರದಲ್ಲಿ ಪಿಎಚ್ ಡಿ ಓದುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಪಿಜಿಯಲ್ಲಿದ್ದ ಪಿಎಚ್ ಡಿ ಓದುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ನಗರದ ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಹೆಚ್ಡಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ ಎನ್ನಲಾಗಿದೆ.
ವಿದ್ಯಾರ್ಥಿನಿ ಚೈತ್ರಾ ತಂದೆ ನಿಧನರಾಗಿದ್ದು, ದೊಡ್ಡಪ್ಪನ ಆಶ್ರಯದಲ್ಲಿದ್ದಳು. ಅಲ್ಲದೆ, ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿದ ನಂತರ ಚೈತ್ರಾ ಕೋಟೆಕಾರು ಬಳಿಯ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ಫುಡ್ ಸೆಕ್ಯುರಿಟಿ ವಿಷಯದ ಮೇಲೆ ಪಿಎಚ್ ಡಿ ಮಾಡುತ್ತಿದ್ದರು.
ಆದರೆ, ಫೆ. 17ರಂದು ಬೆಳಿಗ್ಗೆ ಪಿಜಿಯಿಂದ ಸ್ಕೂಟರಲ್ಲಿ ತೆರಳಿದ್ದಾಕೆ ನಾಪತ್ತೆಯಾಗಿದ್ದಾಳೆ ಎಂದು ಚೈತ್ರಾಳ ದೊಡ್ಡಪ್ಪ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








