ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಉರ್ದು ಶಾಲೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ಪಾಠದ ಅವಧಿ ಕಡಿಮೆ ಮಾಡಲಾಗಿದೆ. ಇದನ್ನು ಸರ್ಕಾರಿ ರಜಾ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯವು ಸುತ್ತೋಲೆ ಹೊರಡಿಸಿದ್ದು, ರಂಜಾನ್ ತಿಂಗಳಲ್ಲಿ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45 ರ ವರೆಗೆ ನಡೆಸಲು ಸೂಚಿಸಲಾಗಿದೆ. ಹಲವಾರು ಮನವಿಗಳನ್ನು ಪರಿಶೀಲನೆ ನಡೆಸಿದ ನಂತರ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ. ಆದರೆ, ಈ ಆದೇಶ ಎಸ್ಸೆಸ್ಸೆಲ್ಸಿ ಪರೀಕ್ಷಾ ಸೇವೆಯಲ್ಲಿರುವ ಶಿಕ್ಷಕರಿಗೆ ಅನ್ವಯಿಸುವುದಿಲ್ಲ.