ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಸಮೀಕ್ಷೆಗಳು ಬಿಡುಗಡೆಯಾಗುತ್ತಿವೆ. ಈಗ ಟೈಮ್ಸ್ ನೌ ವಾಹಿನ ನಡೆಸಿದ ಸಮೀಕ್ಷೆ ಬಿಡುಗಡೆಯಾಗಿದ್ದು, ಒಟ್ಟ 543 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎಗೆ 358 ರಿಂದ 398 ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದೆ.
ಅಲ್ಲದೇ, INDIA ಒಕ್ಕೂಟಕ್ಕೆ 110-130, ವೈಎಸ್ ಆರ್ ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಭವಿಷ್ಯ ನುಡಿದಿದ್ದಾರೆ. 2019ರ ಚುನಾವಣೆಯಲ್ಲಿ ಎನ್ ಡಿಎ 303, INDIA ಒಕ್ಕೂಟ 116, ಇತರರು 44 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು.
ಕರ್ನಾಟಕದಲ್ಲಿ ಬಿಜೆಪಿ 21 ರಿಂದ 23, ಕಾಂಗ್ರೆಸ್ 4 ರಿಂದ 6 ಹಾಗೂ ಜೆಡಿಎಸ್ 1 ರಿಂದ 2 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು. 2019ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನವನ್ನು ಗೆದ್ದರೆ, ಕಾಂಗ್ರೆಸ್ 2, ಜೆಡಿಎಸ್ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 22 ಸ್ಥಾನ ಗೆಲ್ಲುವುದರ ಮೂಲಕ ಟಿಎಂಸಿ ಕೋಟೆ ಛಿದ್ರ ಮಾಡುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಅಭಿಪ್ರಾಯ ಪಟ್ಟಿದೆ. ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನಗಳು ಸಂಪೂರ್ಣ ಬಿಜೆಪಿ ಪಾಲಾಗಲಿವೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟ 65 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಸಮೀಕ್ಷೆ ತಿಳಿಸಿದೆ.








