ನವದೆಹಲಿ : ಭಾರತದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 18 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ ಇದುವರೆಗೆ ಇಷ್ಟು ಪ್ರಕರಣಗಳು ಯಾವತ್ತೂ ದಾಖಲಾಗಿರಲಿಲ್ಲ. ಇದೇ ಮೊದಲ ಬಾರಿಗೆ ಒಂದೇ ದಿನ 18 ಸಾವಿರ ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 18,552 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದ್ದು 5,08,953ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 384 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾಸುರನಿಗೆ ಬಲಿಯಾದರ ಸಂಖ್ಯೆ 15,685ಕ್ಕೆ ಏರಿಕೆ ಆಗಿದೆ.
ಇನ್ನು 5,08,953 ಕೊರೊನಾ ಸೋಂಕಿತರ ಪೈಕಿ 2,95,881 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದ 1,97,387 ಮಂದಿ ಕೊರೊನಾ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆತಂಕಕಾರಿ ವಿಷಯ ಅಂದ್ರೆ ಕಳೆದ ಆರು ದಿನಗಳಿಂದೆ 4 ಲಕ್ಷ ಇದ್ದ ಸೋಂಕಿತರ ಸಂಖ್ಯೆ ಈಗ 5 ಲಕ್ಷ ದಾಟಿದೆ. ಕೇವಲ 6 ದಿನದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ.








