ಬೆಂಗಳೂರು ಗ್ರಾಮಾಂತರ: ಪೊಲೀಸ್ ಠಾಣೆಯ ಹತ್ತಿರವೇ ವಕೀಲರೊಬ್ಬರಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಆನೇಕಲ್ ಠಾಣೆ ಹತ್ತಿರ ನಡೆದಿದೆ. ವಕೀಲ ಮಂಜುನಾಥ್ ಎಂಬುವವರ ಬೆನ್ನು, ಕೈಗೆ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ತಡೆಯಲು ಬಂದ ಸ್ಥಳೀಯರ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಆದರೂ ಬಿಡದ ಸ್ಥಳೀಯರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೂಡಲೇ ವಕೀಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.