ಮಹಿಳಾ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿ ಟ್ರೋಪಿ ಕೈಗೆತ್ತಿಕೊಂಡಿದೆ. ಹೀಗಾಗಿ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಆರ್ ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಆರ್ಸಿಬಿ ಫ್ರಾಂಚೈಸಿಯ 16 ವರ್ಷಗಳ ಕನಸನ್ನು ರಾಯಲ್ ಚಾಲೆಂಜರ್ಸ್ ಮಹಿಳಾ ತಂಡ ಈಡರಿಸಿದೆ. ಈ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕ ವಿಜಯ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ. WPL ಗೆದ್ದ RCB ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. RCB ಪುರುಷರ ತಂಡ ಐಪಿಎಲ್ ಗೆದ್ದರೆ ಈ ಖುಷಿ ಡಬಲ್ ಆಗುತ್ತದೆ. ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.
ಐಪಿಎಲ್ ಸೀಸನ್ 17ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಎಂದು ಮಲ್ಯ ಸಂದೇಶ ರವಾನಿಸಿದ್ದಾರೆ. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್ನಲ್ಲಿ ಮಲ್ಯ ಆರ್ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು. ಆದರೆ, ಆರ್ಥಿಕ ಮುಗ್ಗಟ್ಟಿನಿಂದ ಅವರು ದೇಶ ತೊರೆದರು. ಈಗ ಇಂಗ್ಲೆಂಡ್ನಲ್ಲಿ ನೆಲೆಸಿದ್ದಾರೆ. ಆರ್ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪನಿ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪನಿ ಅಧೀನದಲ್ಲಿದೆ.