ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿದ್ದ ಸಮಾವೇಶದ ವೇಳೆ ದುಷ್ಕರ್ಮಿಗಳ ಗುಂಪು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಘಟನೆ ಮಣಿಪುರದ ಉಖ್ರುಲ್ ನಲ್ಲಿ ನಡೆದಿದೆ.
ಈ ವಿಷಯವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಪಿಸಿಸಿ ಅಧ್ಯಕ್ಷ ಕೆ.ಮೇಘಚಂದ್ರ, ಚಿಂಗೈ ವಿಧಾನಸಭಾ ಕ್ಷೇತ್ರದ ಟೀನೆಮ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಉಖ್ರುಲ್ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಉಖ್ರುಲ್ನ ಪಯೋರಿ ಶಿರುಯಿ ಗ್ರಾಮದ ಟಿಕೆ ವುಡ್ಲ್ಯಾಂಡ್ ರೆಸಾರ್ಟ್ನಲ್ಲಿ ಮಾಜಿ ಶಾಸಕ ಆಲ್ಫ್ರೆಡ್ ಮೇಲೆ ದಾಳಿ ನಡೆದಿದೆ ಎಂದು ಹೇಳಿದ್ದಾರೆ.
ಅಭ್ಯರ್ಥಿಯಾಗಿ ಆಲ್ಫ್ರೆಡ್ ಕಂಗಮ್ ಆರ್ಥರ್ ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದ ಭಾಗವಾಗಿ ಜನರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೇಘಚಂದ್ರ ತಿಳಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಮಣಿಪುರದಲ್ಲಿ ಚುನಾವಣೆ ನಡೆಯುವುದಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.