ಬೆಂಗಳೂರು : ಬೆಂಗಳೂರು ಮಹಾನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511ನೇ ಜಯಂತ್ಯುತ್ಸವಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿಡಿ, ಎಲ್ಲಾ ವರ್ಗಗಳ ಏಳಿಗೆಗಾಗಿ ಶ್ರಮಿಸಿ, ಕೋಟೆ, ಪೇಟೆಗಳನ್ನು ನಿರ್ಮಿಸಿ, ಕೆರೆಕಟ್ಟೆಗಳನ್ನು ಕಟ್ಟಿಸಿ, ನಾಡಿನ ಜನಮಾನಸದಲ್ಲಿ ಸದಾ ಅಚ್ಚಳಿಯದೆ ಕೆಂಪೇಗೌಡರು ಉಳಿದಿದ್ದಾರೆ. ಬೆಂಗಳೂರಿನ ನಿರ್ಮಾತೃ ಸಮರ ವೀರ ನಾಡಪ್ರಭು ಕೆಂಪೇಗೌಡರ ಜಯಂತಿಯಾದ ಇಂದು ಅವರಿಗೆ ನನ್ನ ಗೌರವ ನಮನ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಕುಮಾರಸ್ವಾಮಿ ಟ್ವೀಟ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಆಧುನಿಕ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಹಾರ್ದಿಕ ಶುಭಾಶಯಗಳು.
ಪ್ರಜಾಹಿತಕ್ಕಾಗಿ ಕೆರೆ ಕಟ್ಟೆ, ಪೇಟೆ ಪಟ್ಟಣಗಳನ್ನು ನಿರ್ಮಿಸಿ ನಮ್ಮ ಅಸ್ಮಿತೆ ಹಾಗೂ ನಮ್ಮ ನಾಡಿನ ಹೆಮ್ಮೆಯಾಗಿರುವ ಕೆಂಪೇಗೌಡರಿಗೆ ನನ್ನ ಗೌರವ ನಮನಗಳು ಎಂದು ಶುಭಕೋರಿದ್ದಾರೆ.