ಕೊಪ್ಪಳ: ಪ್ರಧಾನಿ ಮೋದಿ ಹೆಸರು ಹೇಳುವವರ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರ ಮತಯಾಚನೆ ನಡೆಸಿದ ವೇಳೆ ಮಾತನಾಡಿದ ಅವರು, ಯುವಕರು ಏನಾದರೂ ಮೋದಿ ಮೋದಿ ಅಂದರೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿದ್ದಾರೆ.
ಮೋದಿ ಕೇವಲ ಸುಳ್ಳು ಹೇಳುತ್ತಿದ್ದಾರೆ. ಅವರು ಯಾವುದೇ ಅಭಿವೃದ್ಧಿ ಕಾರ್ಯ ಮಾಡುತ್ತಿಲ್ಲ. ಯುವ ಜನರು ಉದ್ಯೋಗ ಕೇಳಿದರೆ ಪಕೋಡಾ ಮಾರಲು ಹೋಗಿ ಎನ್ನುತ್ತಾರೆ. ಈಗ ಮತ್ತೆ ಚುನಾವಣೆ ಬಂತು ಅಂತ ಬರುತ್ತಾರೆ. ಯುವಕರು ಮೋದಿ ಮೋದಿ ಅಂದರೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದ್ದಾರೆ.