ಬೆಂಗಳೂರು: ಹೆಣ್ಣು ಮಕ್ಕಳನ್ನು ನಾನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಎಂಬ ಕಾರಣಕ್ಕೆ ಗ್ಯಾರಂಟಿ ಕೊಟ್ಟು ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದೇನೆ. ಆ ಹೇಳಿಕೆಯನ್ನೇ ಕಾಂಗ್ರೆಸ್ ನಾಯಕರು ತಮಗೆ ಬೇಕಾದಂತೆ ಬಳಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ತುಮಕೂರಿನಲ್ಲಿ ಮಹಿಳಾ ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖ ಪಟ್ಟಿದ್ದು ಬಿಟ್ಟು ಈಗಲೇ ದುಃಖಪಟ್ಟೆ ಅಂತ ಅಧ್ಯಕ್ಷರು, ಮಹಿಳೆಯರ ಪರ ಕಂಬನಿ ಮಿಡಿದಿದ್ದಾರೆ. ಡಿಕೆ ಶಿವಕುಮಾರ್ ಕೆಲವು ಹೆಣ್ಣುಮಕ್ಕಳನ್ನು ಕಿಡ್ನಾಪ್ ಮಾಡಿ ಜಮೀನು ಬರೆಸಿಕೊಂಡಾಗ ದುಃಖ ಬಂದಿಲ್ಲವಾ ಎಂದು ಆರೋಪಿಸಿ ಕಿಡಿಕಾರಿದ್ದಾರೆ.
2 ಸಾವಿರ ಕೊಟ್ಟು ನಿಮ್ಮ ಯಜಮಾನರ ಜೇಬಿಂದ 5 ಸಾವಿರ ಕೀಳುತ್ತಿದ್ದಾರೆ. ಇದರಿಂದ ಎಚ್ಚರವಾಗಿರಿ ಅಂತ ನಾನು ಹೇಳಿದ್ದೇನೆ. ಆರ್ಥಿಕ ಶಕ್ತಿ ಬರಬೇಕು ಅಂತ ಭಾಷಣ ಮಾಡಿದ್ದೇನೆ. 2006-07 ಸಾರಾಯಿ ನಿಷೇಧ ಮಾಡಿದ್ದೇನೆ.
ಕಂಗನಾ ರಣಾವತ್ ಬಗ್ಗೆ ರೇಟ್ ಫಿಕ್ಸ್ ಮಾಡಿದ್ರು. ರಮೇಶ್ ಕುಮಾರ್ ವಿಧಾನಸಭೆ ಕಲಾಪದಲ್ಲಿ ಏನ್ ಹೇಳಿದ್ರು ಮರೆತಿದ್ದೀರಾ? ಮದ್ದೂರಿನಲ್ಲಿ ನನ್ನ ಮಾಜಿ ಶಾಸಕರ ಬಗ್ಗೆ ಮಾತಾಡಿದ್ರು, ಶಾಮನೂರು ಶಿವಶಂಕರಪ್ಪ, ಮಹಿಳೆಯರು ಅಡುಗೆ ಮನೆಯಲ್ಲಿ ಇರೋಕೆ ಲಾಯಕ್ಕು ಅಂತಾರೆ. ಇದಕ್ಕೆ ಉತ್ತರ ಕೊಡಪ್ಪ ಶಿವಕುಮಾರ್ ಎಂದು ವಾಗ್ದಾಳಿ ನಡೆಸಿದ್ದಾರೆ.