ಹೃದಯಾಘಾತಕ್ಕೆ ಬಲಿಯಾಗಿರುವ ಹಿರಿಯ ನಟ ದ್ವಾರಕೀಶ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿನ ಟಿ.ಆರ್ ಮೀಲ್ ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು. ಮಧ್ಯಾಹ್ನದ ವರೆಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಗೆ ಅಂತಿಮ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಷ ನಡೆಸಿದರು. ಚಿತೆಗೆ ಅಗ್ನಿ ಸ್ಪರ್ಷಕ್ಕೂ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವ ಸಲ್ಲಿಸಲಾಯಿತು. ನಂತರ ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಮೊದಲಿಗೆ ಪ್ರೇತ ಸಂಸ್ಕಾರ, ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಯಿತು.
ದ್ವಾರಕೀಶ್ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಫಿ ಕುಡಿದು ಮಲಗಿದವರು ಮರಳಿ ಎದ್ದೇಳಲೇ ಇಲ್ಲ. ಚಿತ್ರೋದ್ಯಮದ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದರು. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದರು.