ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ರಾಯಚೂರಿನ
ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೆಬ್ರವರಿ 2 ರಂದು ನಡೆದ ಧರ್ಮ ಸಮ್ಮೇಳನದಲ್ಲಿ ಮಾತನಾಡಿರುವ ಸ್ವಾಮೀಜಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್ ಗೆ ಆದ ಗತಿಯೇ ಅಗುತ್ತದೆ, ಇನ್ನೂ 14-15 ವಯಸ್ಸು ದಾಟದವರು ಕೂಡ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೂ ಭವಿಷ್ಯದಲ್ಲಿ ಗೌರಿ ಲಂಕೇಶ್ ಗೆ ಆದ ಗತಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ್ದರು.
ಹೀಗೆ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ದೂರು ದಾಖಲಿಸಿದ್ದಾರೆ.








