ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ನಿರ್ಧಾರಕ್ಕೆ ಕಾಯುತ್ತಿರುವ ಅಶೋಕ್
ಬೆಂಗಳೂರು, ಜೂನ್ 29: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ವ್ಯಾಪಕವಾಗಿ ಏರಿಕೆಯಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ನ ಸಮಸ್ಯೆ ಎದುರಾಗಿದೆ. ಖಾಸಗಿ ಆಸ್ಪತ್ರೆಗಳು ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡಲು ಹಿಂಜರಿದ ಹಿನ್ನಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ಗೆ ಅರ್ಧ ಗಂಟೆಗಳಲ್ಲಿ 2500 ಬೆಡ್ಗಳು ಬೇಕೇ ಬೇಕು ಎಂದು ಸೂಚಿಸಿದ್ದಾರೆ. ಅಲ್ಲದೆ ನೀವು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಿ ಎಂದು ಸಚಿವ ಆರ್. ಅಶೋಕ್ ಅವರಿಗೆ ತಾಕೀತು ಮಾಡಿದ್ದು, ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಸಭೆ ನಡೆಸುತ್ತಿದೆ.
ಇತ್ತ ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಚರ್ಚೆ ನಡೆಸುತ್ತಿದ್ದರೆ ಬೆಂಗಳೂರು ಕೋವಿಡ್ 19 ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಅಸೋಸಿಯೇಷನ್ ತೆಗೆದುಕೊಳ್ಳಲಿರುವ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ. ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಚರ್ಚೆ ನಡೆಸುತ್ತಿದ್ದರೆ, ಕೊಠಡಿಯ ಮುಂದೆ ಆರ್. ಅಶೋಕ್ ಚೇರ್ನಲ್ಲಿ ಕುಳಿತು ಅಸೋಸಿಯೇಷನ್ ನ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ.








