ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಗೆ ಮೇ 14ರ ವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಅಂದರೆ 7 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಹೀಗಾಗಿ ಮೇ 14ರ ವರೆಗೂ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಆಪ್ತನನ್ನು ಎಸ್ ಐಟಿ ತೀವ್ರ ವಿಚಾರಣೆಗೊಳಪಡಿಸಿದೆ. ರೇವಣ್ಣ ಪರ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಎಂದು ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ಕಟ್ಟಡದಿಂದ ರೇವಣ್ಣ ಕಣ್ಣೀರು ಹಾಕುತ್ತಾ ಬಂದಿದ್ದಾರೆ.