ಹಾಸನ: ಉಪನ್ಯಾಸಕಿಯೊಬ್ಬರು (Guest Lecturer) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನರಾಯಪಟ್ಟಣದ (Channarayapatna) ಗಾಯಿತ್ರಿ ಬಡಾವಣೆಯಲ್ಲಿಯೇ ಈ ಘಟನೆ ನಡೆದಿದ್ದು, ಅವಿವಾಹಿತ ಉಪನ್ಯಾಸಕಿಯೇ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ. ಮೃತ ದೀಪಾ ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.