ಚಿಕ್ಕೋಡಿ: ಆಂಧ್ರಕ್ಕೆ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಯಮಕನಮರಡಿ (Yamakanamaradi) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು 16,848 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಹಾರ್ಡ್ವೇರ್ ವಸ್ತು ಸಾಗಾಟ ಮಾಡುತ್ತೇವೆ ಎಂದು ಲೈಸೆನ್ಸ್ ಪಡೆದು ಅಕ್ರಮ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಸಂಶಯಗೊಂಡು ದಾಳಿ ನಡೆಸಿದ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ದಾಳಿಯಲ್ಲಿ ಒಟ್ಟು 28 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ಹಲಗೆ, ಸದಾಶಿವ ಗೇರಡೆ ಎಂಬ ಆರೋಪಿಗಲನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.