ಆನೇಕಲ್: ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಕೆರೆಗ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಜಿಲ್ಲೆಯ ಆನೇಕಲ್ ನ ಜಿಗಣಿ ಬಳಿ ನಡೆದಿದೆ. ಅಮೃತೇಶ್ ಪಾಂಡೆ(21) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈ ವಿದ್ಯಾರ್ಥಿ ಬಿಹಾರ ಮೂಲದವನು ಎನ್ನಲಾಗಿದೆ. ಅಮೃತೇಶ್ ಪಾಂಡೆ ಮೈಸೂರು ರಸ್ತೆಯಲ್ಲಿರುವ ಆರ್.ವಿ. ಕಾಲೇಜಿಗೆ ಸೇರಿದ್ದ. ಈತ 3ನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೇಲ್ ನಲ್ಲಿ ಉಳಿದುಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಆದರೆ, ಈತ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಹೀಗಾಗಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದ. ಈ ವಿಷಯ ಮನೆಯಲ್ಲಿ ಗೊತ್ತಾಗುತ್ತದೆ ಎಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಕಾಲೇಜಿನವರು ಫೋನ್ ಮಾಡಿ ತಂದೆಗೆ ವಿಷಯ ತಿಳಿಸುತ್ತಾರೆಂದು ಭಯಪಟ್ಟಿದ್ದ. ಅಲ್ಲದೇ, ಇತ್ತೀಚೆಗೆ ಪಾಲಕರು, ನಾವೇ ಕಾಲೇಜಿಗೆ ಬಂದು ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಸೇರಿಸಿ, ಮರಳಿ ಬರುತ್ತೇವೆ ಎಂದು ಹೇಳಿದ್ದರು. ಇದರಿಂದ ಆತಂಕಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಜಿಗಣಿ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತದೇಹ ಹೊರ ತೆಗೆದು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.