ಬೆಂಗಳೂರು: ನಗರದಲ್ಲಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ರೇವಣ್ಣ ಕಣ್ಣೀರು ಸುರಿಸಿದ್ದಾರೆ.
ಅಲ್ಲಿ ತಂದೆ-ತಾಯಿ ಜೊತೆ ಮಾತನಾಡಿ ಹೊರಡುವ ಸಂದರ್ಭದಲ್ಲಿ ರೇವಣ್ಣ ಅವರು ದೇವೇಗೌಡರ ನಿವಾಸದ ಎದುರು ಕಾರ್ಯಕರ್ತರನ್ನು ಭೇಟಿಯಾದರು. ಈ ವೇಳೆ ಅಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು. ಈ ವೇಳೆ ಕಣ್ಣೀರು ಸುರಿಸಿದರು. ಆಗ ಅಭಿಮಾನಿಗಳು ನೀವು ಅಳಬೇಡಿ ಕಣಣ್ಣ ಎಂದರು. ರೇವಣ್ಣ ಅವರು, ಹಂಗೆಲ್ಲ ಮಾತನಾಡಬಾರದು ಅಂದಾಗ ಯಾಕಣ್ಣ ಮಾತಾಡಬಾರದು ಎಂದು ಕಾರ್ಯಕರ್ತರು ರೊಚ್ಚಿಗೆದ್ದರು. ರೇವಣ್ಣ ಜೊತೆ ಕೆಲ ಕಾರ್ಯಕರ್ತರು ಕೂಡ ಕಣ್ಣೀರು ಹಾಕಿದರು.
ಕೆ.ಆರ್.ನಗರ ಸಂತ್ರಸ್ತೆಯನ್ನು ಅಪಹರಣ ಮಾಡಿಸಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಹೆಚ್‍ಡಿ ರೇವಣ್ಣಗೆ (HD Revanna) ಕಡೆಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಇಂದು ಬಿಡುಗಡೆಯಾದರು. ಸಂಜೆಯಾದ ಕಾರಣ ಕೋರ್ಟ್ ಸಮಯ ಮುಗಿದಿದ್ದರಿಂದ ಷರತ್ತು ಪೂರೈಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಮಧ್ಯಾಹ್ನ ಎಲ್ಲಾ ಪ್ರಕ್ರಿಯೆ ಮುಗಿಸಿ ರೇವಣ್ಣ ಅವರನ್ನು ಬಿಡುಗಡೆಗೊಳಿಸಲಾಯಿತು.