ಬೆಳಗಾವಿ: ಮುಸುಕುಧಾರಿಗಳಿಂದ ರೈಲಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ(Ticket Collector) ಸೇರಿದಂತೆ ಐವರ ಮೇಲೆ ಮುಸುಕುಧಾರಿಗಳು ಹಲ್ಲೆ ನಡೆಸಿದ್ದಾರೆ. ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಖಾನಾಪುರ ತಾಲೂಕಿನ ಲೋಂಡಾ ಬಳಿ ಈ ಘಟನೆ ನಡೆದಿದೆ.
ನಾಲ್ವರು ಅಪರಿಚಿತ ಮುಸುಕುಧಾರಿಗಳು ಪ್ರಯಾಣಿಕರು ಸೇರಿದಂತೆ ಟಿಸಿ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಪರಾರಿಯಾಗಿದ್ದಾರೆ. ಕೂಡಲೇ ಟಿಸಿ ಮತ್ತು ನಾಲ್ವರು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಇನ್ನುಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಕೋಚ್ ಅಟೆಂಡರ್ ದೇವಋಷಿ ವರ್ಮಾ(23) ಸಾವನ್ನಪ್ಪಿರುವ ದುರ್ದೈವಿ. ಪಾಂಡಿಚೇರಿ ಯಿಂದ ಮುಂಬಯಿ ಮಾರ್ಗವಾಗಿ ಚಲಿಸುತ್ತಿದ್ದ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನ ಎಸ್ 8 ಬೋಗಿಯಲ್ಲಿ ಟಿಸಿ ಮೇಲಿನ ಹಲ್ಲೆ ತಡೆಯಲು ಹೋಗಿದ್ದ ಕೋಚ್ ಅಟೆಂಡರ್ಗೆ ಮುಸುಕುಧಾರಿ ಮನಸೋ ಇಚ್ಚೆ ಚಾಕುವಿನಿಂದ ಇರಿದಿದ್ದಕ್ಕೆ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.