ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಮ್ಮಾರಿ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ ಯುವಕ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ.
ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಮಂಗಳೂರಿನ ಬೆಂಗ್ರೆ ನಿವಾಸಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕನೊಬ್ಬ ಕೊರೊನಾಗೆ ಮೃತಪಟ್ಟಿದ್ದಾನೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದ. ಮೃತಪಟ್ಟ ಬಳಿಕ ನಡೆಸಿದ ಕೊರೊನಾ ಟೆಸ್ಟ್‍ನಲ್ಲಿ ಸೋಂಕು ಧೃಡಪಟ್ಟಿದೆ.
ಮಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದ್ದು, ಜನತೆಯಲ್ಲಿ ಆತಂಕ ಹೆಚ್ಚಿಸಿದೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








