ಚೀನಾದಲ್ಲಿ ಕೊರೊನಾ ವೈರಸ್ ಆರ್ಭಟ ಸದ್ಯ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಲ್ಲೇ ಇದೆ. ಇಂದು 600 ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹುಬೇ ನಗರದಲ್ಲಿ ಮಾತ್ರ ಕೊರೊನಾ ಸೋಂಕು ಕೊಂಚ ಮಟ್ಟಿಗೆ ತಗ್ಗಿದರೆ, ವುಹಾನ್ ಹಾಗೂ ಇತರೆಡೆಗಳಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗಿತ್ತಿರುವುದು ವರದಿಯಾಗಿದೆ.
ಶನಿವಾರ ವರದಿಯಂತೆ ಹೊಸದಾಗಿ 397 ಪ್ರಕರಣಗಳು ಪತ್ತೆಯಾಗಿದೆ. 648 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಹುಬೇಯಲ್ಲಿ 96 ಮಂದಿ, ಪ್ರಾವಿನ್ಸ್ ಆಸ್ಪತ್ರೆಯಲ್ಲಿ 82 ಮಂದಿ ಸಾವನ್ನಪ್ಪಿದ್ದಾರೆ. ವುಹಾನ್ ನಗರದಲ್ಲಿ ಇದುವರೆಗೂ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸೋಂಕು ಹರಡುವ ಭೀತಿಯಿಂದ ಜನರು ಮನೆಯಿಂದ ಹೊರಗೆ ಬರದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಚೀನಾದಲ್ಲಿ ಕೊರೊನಾ ವೈರಸ್ ತಗುಲಿರುವವರ ಸಂಖ್ಯೆ ಈವರೆಗೂ 76,936 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಈಗ 2,442ಕ್ಕೆ ತಲುಪಿರುವುದು ಚೀನಾ ಜನರನ್ನ ಆತಂಕಕ್ಕೀಡು ಮಾಡಿದೆ.








