ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್ ಕಸ್ಟಡಿ (Police Custody) ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಎಸ್ ಐಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು (ACMM Court) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಜ್ವಲ್ ವಿರುದ್ಧ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಪ್ರತಿಯೊಂದು ಪ್ರಕರಣವನ್ನು ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್ ಐಟಿ. ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿತ್ತು. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ 14 ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಸಲಾಗಿತ್ತು. ಈಗಾಗಲೇ ಸ್ಥಳ ಮಹಜರು ಸೇರಿದಂತೆ ಎಲ್ಲ ರೀತಿಯಿ ಮೆಡಿಕಲ್ ಟೆಸ್ಟ್ ನಡೆದಿವೆ. ಈ ಮಧ್ಯೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.