ರಾಜ್ಯದಲ್ಲಿ ಒಂದೇ ದಿನ ದಾಖಲೆಯ 1272 ಕೊರೊನಾ ಸೋಂಕು ಪ್ರಕರಣಗಳು
ಬೆಂಗಳೂರು, ಜುಲೈ 2: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ದಾಖಲೆಯ 1272 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಂಜೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಂದೇ ದಿನ 1272 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಮೃತಪಟ್ಟಿರುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 253ಕ್ಕೆ ಏರಿಕೆಯಾಗಿದ್ದರೆ, ಸೋಂಕಿತರ ಸಂಖ್ಯೆ 16,514ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 8603 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರೆ, 8194 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರಿನಲ್ಲಿ 735 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು ಇಬ್ಬರು ಮೃತಪಟ್ಟಿದ್ದರೆ, ಬೀದರ್ ನಲ್ಲಿ ಇಬ್ಬರು ಬೆಳಗಾವಿ ಮತ್ತು ಹಾಸನದಲ್ಲಿ ತಲಾ ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಲ್ಲಿಯವರೆಗಿನ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 5290ಕ್ಕೆ ಏರಿಕೆಯಾಗಿದ್ದರೆ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 543. ಸಕ್ರಿಯ ಪ್ರಕರಣಗಳ ಸಂಖ್ಯೆ 4649. ಬೆಂಗಳೂರಿನಲ್ಲಿ ಇಲ್ಲಿಯವರೆಗೆ 97 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಬೆಂಗಳೂರು – 735, ಬಳ್ಳಾರಿ – 85, ದಕ್ಷಿಣ ಕನ್ನಡ – 84, ಧಾರವಾಡ – 35, ಬೆಂ.ಗ್ರಾಮಾಂತರ – 29, ವಿಜಯಪುರ – 28, ಚಾಮರಾಜನಗರ – 21, ಬಾಗಲಕೋಟೆ – 20, ತುಮಕೂರು – 19, ದಾವಣಗೆರೆ – 16, ಚಿಕ್ಕಬಳ್ಳಾಪುರ – 15, ಕಲಬುರ್ಗಿ – 14, ಬೆಳಗಾವಿ – 8, ರಾಮನಗರ – 14, ಕೊಪ್ಪಳ 13, ರಾಯಚೂರು -12, ಚಿತ್ರದುರ್ಗ – 12, ಯಾದಗರಿ – 8, ಬೀದರ್ – 8, ಕೊಡಗು – 7, ಮಂಡ್ಯ – 5, ಕೋಲಾರ – 5, ಶಿವಮೊಗ್ಗ – 3, ಗದಗ – 2, ಚಿಕ್ಕಮಗಳೂರು – 1 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.








