ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ.
7ನೇ ವೇತನ ಆಯೋಗದ (7th Pay Commission) ಶಿಫಾರಸು ಜಾರಿಗೆ ಮುಂದಾಗಿದೆ. ಈ ಕುರಿತು ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಶೇ. 25 ರಷ್ಟು ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದರೆ, ಶೇ. 27ರಷ್ಟು ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರು ಕೂಡ ಶೇ. 27ರಷ್ಟು ವೇತನ ಹೆಚ್ಚಳಕ್ಕೆ ಒಲವು ತೋರಿದ್ದಾರೆ ಎನ್ನಲಾಗುತ್ತಿದೆ.
ವೇತನ ಆಯೋಗ ಜಾರಿ ಜವಾಬ್ದಾರಿಯನ್ನು ಸಿಎಂಗೆ ನೀಡಿದ್ದು, ಈ ತಿಂಗಳ ಅಂತ್ಯದೊಳಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16 ರಂದು ಅಂತಿಮ ವರದಿ ಸಲ್ಲಿಸಿತ್ತು. ಸರ್ಕಾರಿ ನೌಕರರಿಗೆ ಶೇ. 27.5ರಷ್ಟು ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಒಂದು ವೇಳೆ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೊಳಿಸಿದರೆ ಸರ್ಕಾರಿ ನೌಕರರ ಕನಿಷ್ಠ ವೇತನವು ತಿಂಗಳಿಗೆ 17 ಸಾವಿರ ರೂ.ಗಳಿದಂ 27 ಸಾವಿರ ರೂ.ಗೆ ಏರಿಕೆಯಾಗಲಿದೆ.