ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ
ಮಂಗಳೂರು, ಜುಲೈ 2: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನಲೆಯಲ್ಲಿ ಜುಲೈ 2 ಮತ್ತು 3ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷನೆ ಮಾಡಿದೆ.

ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಧಾರವಾಡ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರ್ಗಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.








