ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೇ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮಂಗಳವಾರ ಕೂಡ ಕರಾವಳಿ, ಮಲೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾದ ವರದಿಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.