ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಚುನಾವಣಾ ನೀತಿಗಳಲ್ಲಿ ಮಹತ್ವದ ಬದಲಾವಣೆಗೆ ನಾಂದಿ ಹಾಡಿದೆ. ಇನ್ನು ಮುಂದೆ ಕೊರೊನಾ ಸೋಂಕಿತರು ಹಾಗೂ 65 ವರ್ಷ ಮೇಲ್ಪಟ್ಟ ವೃದ್ಧರು ಮನೆಯಲ್ಲೇ ಕುಳಿತುಕೊಂಡು ಪೋಸ್ಟಲ್ ಓಟಿಂಗ್ ಮಾಡಬಹುದು ಎಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಪ್ರಕಟಿಸಿದೆ.
ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ಈ ವರ್ಷಾಂತ್ಯಕ್ಕೆ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟು ತೀರ್ಮಾನಕ್ಕೆ ಬರಲಾಗಿದ್ದು, ಈ ಸಂಬAಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಒಂದು ಮತಗಟ್ಟೆಯಲ್ಲಿ ಸುಮಾರು 1 ಸಾವಿರ ಮಂದಿ ಪೋಸ್ಟಲ್ ವೋಟಿಂಗ್ ಮಾಡಬಹುದು. ಇದರಲ್ಲಿ ಸ್ವಲ್ಪ ಹೆಚ್ಚು ಆದರೂ ತೊಂದರೆ ಇಲ್ಲ ಎಂದು ಬಿಹಾರ ಚುನಾವಣಾ ಆಯೋಗ ತಿಳಿಸಿದೆ.
ಕಳೆದ ತಿಂಗಳು ಚುನಾವಣಾ ಸಂಹಿತೆ ತಿದ್ದುಪಡಿ ಕಾಯ್ದೆ 2020ಕ್ಕೆ ತಿದ್ದುಪಡಿ ತರಲಾಗಿದ್ದು, ಕಾಯ್ದೆಯ ನೋಟಿಫಿಕೇಶನನ್ನು ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.
ಕೊರೊನಾ ಕಾರಣಕ್ಕೆ ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನಲ್ಲಿರುವವರು ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಿಲ್ಲ. ಅವರು ಮತಗಟ್ಟೆಗೆ ಬಂದರೆ ಸೋಂಕು ಹರಡುವ ಸಾಧ್ಯತೆ ಇದೆ. ಜತೆಗೆ ಅವರೂ ಮತದಾನದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ.
ಈ ಹಿಂದೆ 80 ವರ್ಷ ಮೇಲ್ಪಟ್ಟವರು ಮಾತ್ರ ಪೋಸ್ಟಲ್ ಬ್ಯಾಲೆಟ್ ಹಾಕಲು ಅರ್ಹತೆ ಹೊಂದಿದ್ದರು. ಇದೀಗ 80 ವರ್ಷದಿಂದ ವಯೋಮಿತಿಯನ್ನು 65ಕ್ಕೆ ಇಳಿಸಲಾಗಿದೆ. ಸಾಮಾನ್ಯವಾಗಿ ಪೋಸ್ಟಲ್ ಬ್ಯಾಲೆಟ್ನ್ನು ಹಾಕಲು ಬೇರೆ ರಾಜ್ಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರು ಹಾಗೂ ಸರ್ಕಾರಿ ನೌಕರರಿಗೆ ಅವಕಾಶ ಇತ್ತು.
ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ
ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...








