ಮಂಗಳೂರಿನ ಶಾಸಕ ಡಾ.ಭರತ್ ಶೆಟ್ಟಿ ಅವರಿಗೆ ಕೊರೊನಾ ಸೋಂಕು
ಮಂಗಳೂರು, ಜುಲೈ 2: ಮಂಗಳೂರಿನ ಶಾಸಕ ಡಾ.ಭರತ್ ಶೆಟ್ಟಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವುದರ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅವರು ಮಾಹಿತಿ ನೀಡಿದ್ದಾರೆ.
ನನಗೆ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಚಿಕಿತ್ಸೆಗೆ ಒಳಗಾಗಿದ್ದೇನೆ . ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಗುಣಮುಖನಾಗಿ ಮರಳಲಿದ್ದೇನೆ ಎಂದು ಡಾ.ಭರತ್ ಶೆಟ್ಟಿ ಟ್ವೀಟ್ ಮಾಡಿದ್ದು, ಜೊತೆಗೆ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಆಗಾಗ ಕೈಗಳನ್ನು ತೊಳೆಯುತ್ತಿರಿ. ನಿಮ್ಮ ಮತ್ತು ನಿಮ್ಮ ಹತ್ತಿರದವರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ವಿನಂತಿ ಮಾಡಿದ್ದಾರೆ.