ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಹೋಂ ಕ್ವಾರಂಟೈನ್‍ನಲ್ಲಿರುವವರು ಹಾಗೂ ಕೋವಿಡ್ ಪಾಸಿಟಿವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹೋಂ ಕ್ವಾರಂಟೈ ಹಾಗೂ ಕೋವಿಡ್ ಪಾಸಿಟಿವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ಕಂಟೈನ್ಮೆಂಟ್ ಪ್ರದೇಶಗಳ 3890 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 670 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 04 ಪ್ರಕರಣಗಳು ನಡೆದಿದ್ದು, ಅವರನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿಯ ಶರಣಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಯೊಬ್ಬನಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆ ವಿದ್ಯಾರ್ಥಿಯೊಂದಿಗೆ ಅದೇ ಕೊಠಡಿಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ 17 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ. ಅವರೆಲ್ಲ ಪ್ರತ್ಯೇಕ ಕೊಠಡಿಯಲ್ಲಿ ಇಂದು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ವಿವರ ನೀಡಿದ್ದಾರೆ.
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ
ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...








