ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿ ಕೊರೊನಾ ಅಬ್ಬರ ಮುಂದುವರೆದಿದ್ದು, ಇಂದು ಮತ್ತೆ 1502 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 889 ಪ್ರಕರಣಗಳು ದಾಖಲಾಗುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಬೆಂಗಳೂರಿನಲ್ಲಿ ಮತ್ತೆ ಮೂವರು ಕೊರೊನಾಗೆ ಉಸಿರು ಚೆಲ್ಲಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು, ಇಂದು ನಾಲ್ವರನ್ನು ಬಲಿಪಡೆದಿದೆ.
ಕೊಪ್ಪಳ, ಹಾಸನ, ಗದಗ, ಮೈಸೂರು, ಬೆಳಗಾವಿ, ತುಮಕೂರು, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ತಲಾ ಒಂದೊಂದು ಮಂದಿ ಉಸಿರು ಚೆಲ್ಲಿದ್ದಾರೆ. ಇಂದಿನ 1502 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 18016ಕ್ಕೆ ಏರಿಕೆಯಾಗಿದೆ. 19 ಮಂದಿ ಸಾವು ಸೇರಿದಂತೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 272ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 889 ಪಾಸಿಟಿವ್ ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 6179ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 90 ಮಂದಿಗೆ ಕೊರೊನಾ ಬಂದಿದೆ. ಮೈಸೂರಿನಲ್ಲಿ ಬರೋಬ್ಬರಿ 69 ಮಂದಿ ಕೊರೊನಾ ಪಾಸಿಟಿವ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.
Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!
ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...








