ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಡೆಂಗ್ಯೂ ಆತಂಕ ಮೂರು ಪಟ್ಟು ಹೆಚ್ಚು! ಹೆಚ್ಚುತ್ತಿವೆ ಸಾವಿನ ವರದಿ

ಭಾನುವಾರವೂ ಸಾವಿನ ವರದಿ

Author2 by Author2
July 7, 2024
in State, ಆರೋಗ್ಯ, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಕರ್ನಾಟಕದಲ್ಲಿ ಡೆಂಗ್ಯೂ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಸಂಖ್ಯೆಯೂ ವರದಿಯಾಗುತ್ತಲೇ ಇವೆ. ಹೀಗಾಗಿ ಜನರಲ್ಲಿ ಆತಂಕ ಮನೆ ಮಾಡುತ್ತಿದೆ.

ಅಲ್ಲದೇ, ಕಳೆದ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ ಮೂರು ಪಟ್ಟು ಹೆಚ್ಚುವರದಿಯಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 53,866 ಜರನ್ನು ಡೆಂಗ್ಯೂ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ ಬರೋಬ್ಬರಿ 7006 ಜನರಲ್ಲಿ ರೋಗ ದೃಢಪಟ್ಟಿದೆ. 352 ಸಕ್ರಿಯ ಪ್ರಕರಣಗಳಿದ್ದು, 6 ಜನ ಈಗಾಗಲೇ ಡೆಂಗ್ಯೂಗೆ ಬಲಿಯಾಗಿದ್ದಾರೆ. ಜುಲೈ 6ರಂದು ಶನಿವಾರ 753 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 175 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದು ವರ್ಷದೊಳಗಿನ ಮಗು, 1 ರಿಂದ 18 ವರ್ಷದ 53 ಮಕ್ಕಳು, 18 ವರ್ಷ ಮೇಲ್ಪಟ್ಟ 121 ಜನರಲ್ಲಿ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿರುವುದು ತೀವ್ರ ಭಯಕ್ಕೆ ಕಾರಣವಾಗುತ್ತಿದೆ. ಈ ಪೈಕಿ ಹಾಸನದಲ್ಲಿ 2, ಬೆಂಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿಯಲ್ಲಿತಲಾ ಒಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಆದರೆ, ಹಿಂದಿನ ವರ್ಷ ಇದೇ ಸಮಯದಲ್ಲಿ ರಾಜ್ಯದಲ್ಲಿ 2432 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದವು. ಆದರೆ, ಆ ವೇಳೆ ಯಾವುದೇ ಸಾವು -ನೋವು ಸಂಭವಿಸಿರಲಿಲ್ಲ. ಆದರೆ, ಈ ಬಾರಿ ಪ್ರಕರಣಗಳ ಸಂಖ್ಯೆ 7 ಸಾವಿರ ಗಡಿದಾಟಿವೆ. ಈ ಮೂಲಕ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಆ ಜಿಲ್ಲೆಗಳಲ್ಲಿ ಆತಂಕ ಮನೆ ಮಾಡುತ್ತಿದೆ. ಹೆಚ್ಚು ಪೀಡಿತ ಜಿಲ್ಲೆಗಳನ್ನು ನೋಡುವುದಾದರೆ, ಬೆಂಗಳೂರು – 1908, ಚಿಕ್ಕಮಗಳೂರು – 521, ಮೈಸೂರು – 496, ಹಾವೇರಿ – 481, ಶಿವಮೊಗ್ಗ – 292, ಧಾರವಾಡ – 289, ಚಿತ್ರದುರ್ಗ – 275, ದಕ್ಷಿಣ ಕನ್ನಡ – 263, ಹಾಸನ – 221, ಮಂಡ್ಯ – 215 ಪ್ರಕರಣಗಳು ದಾಖಲಾಗಿವೆ.

ಆದರೆ, ಕಳೆದ ಒಂದು ವಾರದಿಂದ ರಾಜ್ಯದ ಬೆಂಗಳೂರು, ಬೆಳಗಾವಿ, ವಿಜಯಪುರ, ಗದಗ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಮಂಡ್ಯ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿವೆ. ಹಳೆಯ ಟಯರ್ ಗಳು, ತೆಂಗಿನ ಚಿಪ್ಪು, ಘನ ತ್ಯಾಜ್ಯಗಳಾದ ಪ್ಲಾಸ್ಟಿಕ್‌ ಬಾಟಲ್‌, ಒಡೆದು ಹೋದ ಮಡಿಕೆ ಸೇರಿದಂತೆ ನೀರು ನಿಲ್ಲುವ ಎಲ್ಲ ವಸ್ತುಗಳನ್ನು ವಿಲೇವಾರಿ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಹೂವಿನ ಕುಂಡ, ಪ್ಲಾಸ್ಟಿಕ್‌ ಕವರ್‌ನಂತಹ ವಸ್ತುಗಳಲ್ಲಿ ಹೆಚ್ಚು ದಿನಗಳ ಕಾಲ ನೀರು ನಿಲ್ಲುವುದರಿಂದ ಸೊಳ್ಳೆಗಳ ಸಂತಾನ ವೃದ್ಧಿಯಾಗದಂತೆ ನೋಡಿಕೊಳ್ಳಬೇಕು. ಶನಿವಾರ ಬೆಂಗಳೂರಿನಲ್ಲಿ ಡೆಂಗ್ಯೂಗೆ ಬಾಲಕ ಬಲಿಯಾಗಿದ್ದರೆ, ಭಾನುವಾರ ಗದಗ ಜಿಲ್ಲೆಯಲ್ಲಿ 5 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪ್ರತಿ ದಿನ ಯಾವುದಾದರೊಂದು ಜಿಲ್ಲೆಯಲ್ಲಿ ಸಾವಿನ ಪ್ರಕರಣ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತರಾಗಿದ್ದಾರೆ. ಹೀಗಾಗಿ ಜನರು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಹೇಳುತ್ತಿದ್ದಾರೆ.

Tags: Dengue anxiety is three times more! Reports of deaths are increasing
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

by Shwetha
June 30, 2026
0

ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram