ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಭಿವೃದ್ಧಿಯೇ ನಮ್ಮ ಮೊದಲ ಗುರಿ : ಸಚಿವ ಬಿ.ಸಿ.ಪಾಟೀಲ

admin by admin
July 3, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯದಲ್ಲಿ ಪ್ರಸಕ್ತ 4 ಫುಡ್ ಪಾರ್ಕ್ ಗಳಿದ್ದು, ಅವುಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಹೆಚ್ಚಾಗಬೇಕು. ಅಭಿವೃದ್ಧಿಯೇ ನಮ್ಮ ಮೊದಲ ಗುರಿ. ಫುಡ್ ಪಾರ್ಕ್ ಗಳ ಅಭಿವೃದ್ಧಿ ಹಾಗೂ ಉದ್ದೇಶಗಳ ಈಡೇರಿಕೆಗೆ ಸರ್ಕಾರ ಫುಡ್ ಪಾರ್ಕ್ ಗಳ ಹಿಂದೆ ಶಕ್ತಿಯಾಗಿ ಬೆಂಬಲಿಸಲಿದೆ ಎಂದು ಫುಡ್ ಕರ್ನಾಟಕ ಲಿಮಿಟೆಡ್ ಅಧ್ಯಕ್ಷರೂ ಆಗಿರುವ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಸಹಾಯಹಸ್ತ ನೀಡಿದರು.

ರಾಜ್ಯದಲ್ಲಿ ಫುಡ್ ಕರ್ನಾಟಕ ಲಿಮಿಟೆಡ್ ಸಂಸ್ಥೆಯನ್ನು ಬಲವರ್ಧನೆಗೆ ರೂಪಿತಗೊಂಡಿರುವ “ಫುಡ್ ಪಾರ್ಕ್”ಗಳ ಪುನಶ್ಚೇತನ ಸಂಬಂಧ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ‘ಫುಡ್ ಕರ್ನಾಟಕ ಲಿಮಿಟೆಡ್’ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಜ್ಯದ ನಾಲ್ಕು ಫುಡ್ ಪಾರ್ಕ್ ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಸಚಿವರು ಮಾತನಾಡಿದರು.
ಕೇಂದ್ರದ ಆತ್ಮನಿರ್ಭರ್ ಯೋಜನೆಯಲ್ಲಿ “ಫುಡ್ ಪಾರ್ಕ್ ಗೆ” 4 ಸಾವಿರ ಕೋಟಿ ರೂ.ಅನುದಾನ ಒದಗಿಸಲಾಗಿದೆ. ಅನುದಾನದ ಉದ್ದೇಶ ಸಫಲವಾಗಬೇಕು. ಲಾಕ್ಡೌನ್ ಆದ ಸಂದರ್ಭದಲ್ಲಿ ರೈತರ ಆರ್ಥಿಕ ಪರಿಸ್ಥಿತಿ ನಿಭಾಯಿಸಲು “ಆಹಾರ ಉತ್ಪಾದನಾ ಘಟಕ’ಗಳು ಸಹಾಯಕವಾಗಲಿದೆ ಎಂಬುದನ್ನು ಗಮನಿಸಿ ರಾಜ್ಯದಲ್ಲಿನ “ಫುಡ್ ಪಾರ್ಕ್’ಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು ಎಂದರು.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಈ ನಾಲ್ಕು ಫುಡ್ ಪಾರ್ಕ್ ಗಳ ಅಭಿವೃದ್ಧಿಯನ್ನು ಕಂಡು ರಾಜ್ಯದಲ್ಲಿ ಇನ್ನಷ್ಟು ಫುಡ್ ಪಾರ್ಕ್ ಗಳ ಸ್ಥಾಪನೆಗೆ ಜನರು ಮುಂದಾಗಬೇಕು. ಸರ್ಕಾರ ಸದಾ ಫುಡ್ ಪಾರ್ಕ್ ಗಳ ಹಿಂದೆ ಬೆನ್ನೆಲುಬಾಗಿ ನಿಲ್ಲಲಿದೆ. ಫುಡ್ ಪಾರ್ಕ್ ಗಳನ್ನು ಆರಂಭಿಸಿದ ಉದ್ದೇಶ ಈಡೇರಲೇಬೇಕು. ಹಣ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಫುಡ್ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸದೇ ಇರುವುದು ಸರಿಯಲ್ಲ. ಕಾರಣಗಳು ಸರಿಯಾಗಿರಬೇಕು. ಸಮರ್ಪಕವಾಗಿ ಕಾರ್ಯನಿರ್ವಹಿಸದ ಗುರಿಸಾಧಿಸದ ಫುಡ್ ಪಾರ್ಕ್ ಗಳ ಮುಖ್ಯಸ್ಥರಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಫುಡ್ ಪಾರ್ಕ್ ಗಳ ನಿರ್ಮಾಣಕ್ಕೆ ಸುದ್ದೇಶಕ್ಕಾಗಿ ಕಡಿಮೆ ವೆಚ್ಚದಲ್ಲಿ ಭೂಮಿ ಮಂಜೂರು ಮಾಡಿದೆ. ಸರ್ಕಾರದಿಂದ ಮಂಜುರಾದ ಭೂಮಿ ಫುಡ್ ಪಾರ್ಕ್ಗಳ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ರಾಜ್ಯದಲ್ಲಿರುವ 1.30 ಕೋಟಿ ಜನಸಂಖ್ಯೆಯಲ್ಲಿ ನಾಲ್ಕು ಮಂದಿ ಮಾತ್ರ ಫುಡ್ ಪಾರ್ಕ್ ನಿರ್ಮಿಸಿದ್ದನ್ನು ನೋಡಿದರೆ ಫುಡ್ ಪಾರ್ಕ್ ನಿರ್ಮಿಸಿದ ವ್ಯಕ್ತಿಗಳು ವಿಶೇಷ ಎಂಬುದು ಹೆಮ್ಮೆಯ ವಿಷಯವೂ ಹೌದು. ಫುಡ್ ಪಾರ್ಕ್ ಗಳ ಅಭಿವೃದ್ಧಿಗೆ ಅಗತ್ಯವಾದ ಸೌಲಭ್ಯಗಳನ್ನು ಸರ್ಕಾರ ನೀಡಲಿದೆ. ರಸ್ತೆಯಿಲ್ಲ ಎನ್ನುವುದೆಲ್ಲ ಕಾರಣಗಳಲ್ಲ. ರೈತರಿಗೆ ಅನುಕೂಲ ಕಲ್ಪಿಸಲು ಮತ್ತು ರೈತರ ಉತ್ಪನ್ನಗಳ ಸದುಪಯೋಗ ಹಾಗೂ ಕೃಷಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ನವೋದ್ಯಮಕ್ಕೆ ಚೈತನ್ಯ ನೀಡುವ ನಿಟ್ಟಿನಲ್ಲಿ “ಅಗ್ರಿಸ್ಟಾರ್ಟಪ್”ಗೆ ಇನ್ನೂ ಕೆಲವೇ ದಿನಗಳಲ್ಲಿ ಚಾಲನೆಯನ್ನು ನೀಡಲಾಗುತ್ತಿದೆ. ಅಗ್ರಿ ಸ್ಟಾರ್ಟಪ್ ಮೂಲಕ ಫುಡ್ ಪಾರ್ಕ್ ಗಳಿಗೂ ಅನುಕೂಲ ಕಲ್ಪಿಸಬಹುದೆಂದು ಬಿ.ಸಿ.ಪಾಟೀಲರು ಮಾಹಿತಿ ನೀಡಿದರು.

ಏನಿದು ಫುಡ್ ಪಾರ್ಕ್:
10 ನೇ ಪಂಚವಾರ್ಷಿಕ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಸಚಿವಾಲಯ ರಾಜ್ಯದಲ್ಲಿ ಕೋಲಾರ, ಹಿರಿಯೂರು, ಬಾಗಲಕೋಟೆ, ಜೇವರ್ಗಿ ಗಳಲ್ಲಿ ಫುಡ್ ಪಾರ್ಕ್ ಗಳ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಈ ಪಾರ್ಕ್ ಗಳ ಸ್ಥಾಪನಾ ಕಾರ್ಯದ ಉಸ್ತುವಾರಿ ಸಂಸ್ಥೆಯಾಗಿ ಆಹಾರ ಕರ್ನಾಟಕ ನಿಯಮಿತ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ.
ರಾಜ್ಯದಲ್ಲಿ 2003 ರಲ್ಲಿ ಮಾಲೂರಿನಲ್ಲಿ “ಇನ್ನೋವಾ ಅಗ್ರಿ ಬಯೋಪಾರ್ಕ್”, ಬಾಗಲಕೋಟೆಯಲ್ಲಿ “ಗ್ರೀನ್ ಫುಡ್ ಪಾರ್ಕ್”, ಹಿರಿಯೂರಿನಲ್ಲಿ “ಅಕ್ಷಯ ಆಹಾರ ಪಾರ್ಕ್ ನಿಯಮಿತ” ಜೇವರ್ಗಿಯಲ್ಲಿ “ಜೇವರ್ಗಿ ಫುಡ್ ಪಾರ್ಕ್ ನಿಯಮಿತ” ಕಾರ್ಯನಿರ್ವಹಿಸುತ್ತಿವೆ.
ಸಭೆಯಲ್ಲಿ ಮೇಲ್ಮನೆ ಸದಸ್ಯ ನಾರಾಯಣಸ್ವಾಮಿ,ಹಿರಿಯೂರು ಶಾಸಕಿ ಪೂರ್ಣಿಮಾ ಉಪಸ್ಥಿತರಿದ್ದು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೃಷಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಕತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಆಹಾರ ಸಂಸ್ಕರಣಾ ಹಾಗೂ ಕೊಯ್ಲೋತ್ತರ ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ಮನೋಜ್ ರಾಜನ್ ಸೇರಿದಂತೆ ಅಧಿಕಾರಿಗಳು ಹಾಗೂ ನಾಲ್ಕೂ ಫುಡ್ ಪಾರ್ಕ್ ಗಳ ಮುಖ್ಯಸ್ಥರು ಭಾಗವಹಿಸಿದ್ದರು.

Tags: B C PatilbangaloreFood Park
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram