ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು ಇಂದು ಅಹ್ಮದಾಬಾದ್ ಗೆ ಪತ್ನಿ ಜತೆ ಆಗಮಿಸಲಿದ್ದಾರೆ. ಟ್ರಂಪ್ ಅವರನ್ನ ಸ್ವಾಗತಿಸಲು ಭಾರತ ಸಕಲ ರೀತಿಯಲ್ಲೂ ಸಿದ್ಧತೆಗಳನ್ನು ನಡೆಸಿದೆ. ಈ ಮಧ್ಯೆ ಡೊನಾಲ್ಡ್ ಟ್ರಂಪ್ ಹಿಂದಿಯಲ್ಲಿ ಟ್ವೀಟ್ ಮಾಡಿ, ನಾನು ಭಾರತಕ್ಕೆ ಬರಲು ತೀವ್ರ ಕಾತರನಾಗಿದ್ದೇನೆ. ಇನ್ನು ಕೆಲವೇ ಗಂಟೆಗಳಲ್ಲಿ ನಾನು ಭಾರತದಲ್ಲಿರುತ್ತೇನೆ. ನಾವೀಗ ಮಾರ್ಗ ಮಧ್ಯದಲ್ಲಿದ್ದೇವೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಭಾರತಕ್ಕೆ ಆಗಮಿಸುವ ಟ್ರಂಪ್ ಮೊದಲಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಯ ನಂತರ ಮೋಟೆರಾ ಸ್ಟೇಡಿಯಂನಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.









