ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation Case) ಬಹುಕೋಟಿ ಹಗರಣದಲ್ಲಿ ಕಾಂಗ್ರೆಸ್ ನ (Congress) ಮಾಜಿ ಸಚಿವ ನಾಗೇಂದ್ರ ಅವರಿಗೆ ಕೋರ್ಟ್ ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಇಡಿ ಅಧಿಕಾರಿಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನಾಗೇಂದ್ರ (Nagendra) ಅವರನ್ನು ಸೋಮವಾರ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಪ್ರಕರಣದಲ್ಲಿ ಈಗಾಗಲೇ 5 ದಿನಗಳಂತೆ ಎರಡು ಬಾರಿ ಈಗಾಗಲೇ ಇ.ಡಿ ಕಸ್ಟಡಿಗೆ ಪಡೆದಿತ್ತು. ಅಕ್ರಮದ ಕುರಿತು ಇ.ಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿಲ್ಲ. ಮತ್ತೆ ಕಷ್ಟಡಿಗೆ ಕೇಳಲು ಇಡಿ ಸಿದ್ಧತೆ ನಡೆಸಿತ್ತು.
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.








